ADVERTISEMENT

ಆರೋಗ್ಯ ಕವಚ 108: ಅನುಷ್ಠಾನಕ್ಕೆ ತಾಂತ್ರಿಕ ಸಮಿತಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2023, 0:52 IST
Last Updated 23 ಜುಲೈ 2023, 0:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಆರೋಗ್ಯ ಕವಚ 108’ ಯೋಜನೆಯಡಿ ಆಂಬುಲೆನ್ಸ್ ಸೇವೆ ಸುಧಾರಿಸಲು ಮುಂದಾಗಿರುವ ಆರೋಗ್ಯ ಇಲಾಖೆ, ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನ ಮಾಡಲು ತಾಂತ್ರಿಕ ಸಮಿತಿ ರಚಿಸಿದೆ. 

‘104’ ಆರೋಗ್ಯ ಸಹಾಯವಾಣಿ ಸೇವೆ ಸುಧಾರಿಸಲು ಸಹ ಈ ಸಮಿತಿ ನೆರವಾಗಲಿದೆ. ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ, ಕಾರ್ಮಿಕ ಇಲಾಖೆಯ ಆಯುಕ್ತ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರನ್ನು ಸಮಿತಿ ಒಳಗೊಂಡಿರಲಿದೆ ಎಂದು ಇಲಾಖೆ ತಿಳಿಸಿದೆ.

ಟೆಂಡರ್‌ ಪ್ರಕ್ರಿಯೆ, ಉತ್ತಮ ಆರೋಗ್ಯ ಸೇವೆಗೆ ಅಳವಡಿಸಿಕೊಳ್ಳಬೇಕಾದ ಸೌಲಭ್ಯ, ತಂತ್ರಜ್ಞಾನದ ಬಗ್ಗೆ ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಇಲಾಖೆ ಹೇಳಿದೆ. 

ADVERTISEMENT

ಯೋಜನೆ ನಿರ್ವಹಿಸುತ್ತಿರುವ ಜಿವಿಕೆ–ಇಎಂಆರ್‌ಐ ಸಂಸ್ಥೆ ವಿರುದ್ಧ ಆರೋಪಗಳಿದ್ದವು. ವೇತನ ಪಾವತಿಯಾಗುತ್ತಿಲ್ಲ ಎಂದು ಸಂಸ್ಥೆಯ ನೌಕರರು ದೂರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.