ADVERTISEMENT

ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ತೆರೆ: ಸಚಿವರಿಂದ ಗೋಪುರಕ್ಕೆ ಸಾಂಕೇತಿಕ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 21:03 IST
Last Updated 9 ನವೆಂಬರ್ 2022, 21:03 IST
ಮೃತ್ತಿಕಾ ಸಂಗ್ರಹಣೆ ಅಭಿಯಾನದ ಅಂಗವಾಗಿ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡಿನ 22 ಸಾವಿರಕ್ಕೂ ಹೆಚ್ಚು ಸ್ಥಳಗಳಿಂದ ಸಂಗ್ರಹಿಸಿ ತರಲಾಗಿದ್ದ ಪವಿತ್ರ ಮೃತ್ತಿಕೆಯನ್ನು ಸಚಿವರು, ಸಂಸದರು ಸಮರ್ಪಿಸಿದರು. 
ಮೃತ್ತಿಕಾ ಸಂಗ್ರಹಣೆ ಅಭಿಯಾನದ ಅಂಗವಾಗಿ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡಿನ 22 ಸಾವಿರಕ್ಕೂ ಹೆಚ್ಚು ಸ್ಥಳಗಳಿಂದ ಸಂಗ್ರಹಿಸಿ ತರಲಾಗಿದ್ದ ಪವಿತ್ರ ಮೃತ್ತಿಕೆಯನ್ನು ಸಚಿವರು, ಸಂಸದರು ಸಮರ್ಪಿಸಿದರು.    

ದೇವನಹಳ್ಳಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ಶುಕ್ರವಾರ ಲೋಕಾರ್ಪಣೆಯಾಗಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆಯ ಭಾಗವಾಗಿ 15 ದಿನ ರಾಜ್ಯದಾದ್ಯಂತ ಸಂಚರಿಸಿದ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಬುಧವಾರ ತೆರೆ ಬಿದ್ದಿದೆ.

ನಾಡಿನ 22 ಸಾವಿರಕ್ಕೂ ಹೆಚ್ಚು ಸ್ಥಳಗಳಿಂದ ಸಂಗ್ರಹಿಸಿ ತರ ಲಾಗಿದ್ದ ಮಣ್ಣನ್ನು ಸ್ವೀಕರಿಸಿ ಪ್ರತಿಮೆಯ ನಾಲ್ಕು ಗೋಪುರಗಳ ಪೈಕಿ ಒಂದಕ್ಕೆ ಸಾಂಕೇತಿಕವಾಗಿ ಸಮರ್ಪಿಸಲಾಯಿತು.

ನಾಡಪ್ರಭು ಕೆಂಪೇಗೌಡರ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ, ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಮತ್ತು ಸಚಿವರಾದ ಆರ್.ಅಶೋಕ, ಎಂ.ಟಿ.ಬಿ. ನಾಗರಾಜ್, ಸಂಸದರಾದ ಡಿ.ವಿ.ಸದಾನಂದಗೌಡ, ಬಿ.ಎನ್.ಬಚ್ಚೇಗೌಡ, ರಾಜ್ಯಸಭಾ ಸದಸ್ಯ ಜಗ್ಗೇಶ್, ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಲತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.