ಬೆಂಗಳೂರು: 2008, 2009ನೇ ಸಾಲಿನ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಇದೇ 11ರಂದು ಸಂಜೆ 5 ಗಂಟೆಗೆ ಇಲ್ಲಿನ ‘ರವೀಂದ್ರ ಕಲಾಕ್ಷೇತ್ರ’ದಲ್ಲಿ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
2008ನೇ ಸಾಲಿನ ‘ಕರ್ನಾಟಕ ರತ್ನ’ ಪ್ರಶಸ್ತಿ ಪುರಸ್ಕೃತರಾದ ಡಾ.ದೇ. ಜವರೇಗೌಡ ಮತ್ತು 2009ನೇ ಸಾಲಿನ ‘ಕರ್ನಾಟಕ ರತ್ನ’ ಪ್ರಶಸ್ತಿ ಪುರಸ್ಕೃತರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಆರ್. ಅಶೋಕ, ಸಂಸದ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.