ADVERTISEMENT

‘12 ಗಂಟೆ ಕೆಲಸ: ಆರೋಗ್ಯದ ಮೇಲೆ ದುಷ್ಪರಿಣಾಮ’

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2023, 5:02 IST
Last Updated 13 ಮಾರ್ಚ್ 2023, 5:02 IST
ನಗರದಲ್ಲಿ ಮುನ್ನಡೆ ಸಾಮಾಜಿಕ ಸಂಸ್ಥೆ ಮತ್ತು ಫೆಡಿನ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿದ್ದ ಮಹಿಳೆಯರು
ನಗರದಲ್ಲಿ ಮುನ್ನಡೆ ಸಾಮಾಜಿಕ ಸಂಸ್ಥೆ ಮತ್ತು ಫೆಡಿನ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿದ್ದ ಮಹಿಳೆಯರು   

ಬೆಂಗಳೂರು: ‘ಮಹಿಳೆ ಈಗಾಗಲೇ ಹಲವು ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾಳೆ. 12 ಗಂಟೆಯ ಕೆಲಸದ ಅವಧಿಯಿಂದ ಮಹಿಳೆಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ’ ಎಂದು ಲೇಖಕಿ ಕೆ. ಷರೀಫಾ ಭಾನುವಾರ ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ಮುನ್ನಡೆ ಸಾಮಾಜಿಕ ಸಂಸ್ಥೆ ಮತ್ತು ಫೆಡಿನ ಸಹಯೋಗದಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಹಿಳಾ ದಿನ’ ಕಾರ್ಯಕ್ರಮದಲ್ಲಿ ಅವರು, ‘ಗಾರ್ಮೆಂಟ್ಸ್‌ ಉದ್ಯಮದಲ್ಲಿ ಮಹಿಳಾ ಕಾರ್ಮಿಕರೇ ಹೆಚ್ಚಿದ್ದಾರೆ. ಸರ್ಕಾರ 12 ಗಂಟೆಯ ಕೆಲಸ ಅವಧಿ ಮಸೂದೆ ಹಿಂಪಡೆಯಬೇಕು’ ಎಂದರು.

ಇಶ್ರತ್ ನಿಸಾರ್, ನಿತ್ಯಾನಂದಾ, ಪಾವನ ಲಿಂಗಯ್ಯ, ಗೀತಾ ಹಾಗೂ ಸರಳ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.