ADVERTISEMENT

14 ವರ್ಷದ ಬಾಲಕಿಗೆ ಬಹು ಅಂಗಾಂಗ ವೈಫಲ್ಯ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 20:46 IST
Last Updated 19 ನವೆಂಬರ್ 2020, 20:46 IST

ಬೆಂಗಳೂರು: ಕೋವಿಡ್‌ನಿಂದ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದ 14 ವರ್ಷದ ಬಾಲಕಿಗೆ ನಗರದ ಬನ್ನೇರುಘಟ್ಟದ ರೈನ್ ಬೋ ಮಕ್ಕಳ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕೊರೊನಾ ಸೋಂಕು ತಗುಲಿದ ಬಳಿಕ ಬಾಲಕಿಗೆ ಮೂತ್ರಪಿಂಡ, ಶ್ವಾಸಕೋಶ ಹಾಗೂ ಹೃದಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಕಡಿಮೆ ರಕ್ತದೊತ್ತಡಕ್ಕೆ ಒಳಗಾದ ಪರಿಣಾಮ ಅವಳ ಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು. ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಕಾಣಿಸಿಕೊಂಡಿದ್ದ ಕಾರಣ ಮಕ್ಕಳ ತೀವ್ರ ನಿಗಾ ಘಟಕದಲ್ಲಿ (ಪಿಐಸಿಯು) ದಾಖಲಿಸಿ, ಪರೀಕ್ಷೆಗೆ
ಒಳಪಡಿಸಲಾಯಿತು. ಈ ವೇಳೆ ಬಾಲಕಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವುದು ಪತ್ತೆಯಾಯಿತು. ಕೂಡಲೇ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಿ, ಚಿಕಿತ್ಸೆ ನೀಡಲಾಯಿತು. ಮೂತ್ರಪಿಂಡದ ವೈಫಲ್ಯಕ್ಕೆ ಡಯಾಲಿಸಿಸ್ ಮಾಡಲಾಯಿತು ಎಂದು ಆಸ್ಪತ್ರೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT