ಬೆಂಗಳೂರು: ರಾಜ್ಯದಲ್ಲಿನ ನಾಲ್ಕು ಕಂದಾಯ ವಿಭಾಗಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 147 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಅನುಮೋದನೆ ನೀಡಿದೆ.
ಶಾಲೆಯಲ್ಲಿ ಒಂದರಿಂದ 8ನೇ ತರಗತಿವರೆಗೆ ಓದುತ್ತಿರುವ ಮಕ್ಕಳ ಸಂಖ್ಯೆ, ಮೂಲಸೌಕರ್ಯಗಳ ಲಭ್ಯತೆ ಸೇರಿದಂತೆ ಅಗತ್ಯ ಮಾನದಂಡಗಳನ್ನು ಪೂರೈಸಿದ ಶಾಲೆಗಳನ್ನು ಜಿಲ್ಲಾವಾರು ಪಟ್ಟಿ ಮಾಡಿ ಮೇಲ್ದರ್ಜೆಗೇರಿಸಲಾಗಿದೆ. 2025–26ನೇ ಸಾಲಿನಿಂದಲೇ ಇದು ಜಾರಿಗೆ ಬರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
ಬೆಳಗಾವಿ ವಿಭಾಗದಲ್ಲಿ 88, ಬೆಂಗಳೂರು ವಿಭಾಗದಲ್ಲಿ 49, ಕಲಬುರಗಿ ವಿಭಾಗದಲ್ಲಿ ಆರು ಹಾಗೂ ಮೈಸೂರು ವಿಭಾಗದಲ್ಲಿನ ನಾಲ್ಕು ಶಾಲೆಗಳು ಈ ಪಟ್ಟಿಯಲ್ಲಿ ಸೇರಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.