ADVERTISEMENT

15 ಜಿಲ್ಲೆಗಳಲ್ಲಿ ರಾಗಿ ಖರೀದಿ ಕೇಂದ್ರ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2018, 19:54 IST
Last Updated 25 ಫೆಬ್ರುವರಿ 2018, 19:54 IST

ಬೆಂಗಳೂರು: ಬೆಂಬಲ ಬೆಲೆ ನೀಡಿ ನೇರವಾಗಿ ರೈತರಿಂದ ರಾಗಿಯನ್ನು ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ರಾಜ್ಯದಾದ್ಯಂತ 15 ಕಡೆ ಕೇಂದ್ರಗಳನ್ನು ಆರಂಭಿಸಿದೆ.

ಈ ಖರೀದಿ ಕೇಂದ್ರಗಳಲ್ಲಿ ಕ್ವಿಂಟಲ್‌ ರಾಗಿಗೆ ₹2,300 ಬೆಲೆ ನಿಗದಿಪಡಿಸಲಾಗಿದೆ. ಹೆಸರು ನೋಂದಾಯಿಸಿಕೊಳ್ಳಲು ಇದೇ 28 ಕೊನೆಯ ದಿನ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಖರೀದಿ:

ADVERTISEMENT

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.