ವಂಚನೆ
ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ನಗರದ ವ್ಯಕ್ತಿಯೊಬ್ಬರಿಗೆ ಒಟ್ಟು ₹1.92 ಕೋಟಿ ವಂಚನೆ ಮಾಡಿದ್ದು, ಈ ಬಗ್ಗೆ ಕೇಂದ್ರ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘2021ರಲ್ಲಿ ಅಪರಚಿತ ವ್ಯಕ್ತಿ ದೂರುದಾರರಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದರು. ಹಣ ಹೂಡಿಕೆ ಮಾಡಿ ಹೆಚ್ಚು ಲಾಭಗಳಿಸಬಹುದು ಎಂದು ಆಮಿಷವೊಡ್ಡಿದ್ದರು. ಇದನ್ನು ನಂಬಿದ ದೂರುದಾರ ಆರೋಪಿ ಕಳಿಸಿದ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ₹1.50 ಕೋಟಿ ಹೂಡಿಕೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.
‘2024ರಲ್ಲಿ ಅದೇ ವ್ಯಕ್ತಿ ದೂರುದಾರರಿಗೆ ಕರೆ ಮಾಡಿ, 2021ರಲ್ಲಿ ನೀವು ಹೂಡಿಕೆ ಮಾಡಿದ್ದ ₹1.50 ಕೋಟಿಗೆ ₹5.89 ಕೋಟಿ ಲಾಭ ಬಂದಿದೆ. ಈ ಹಣ ನಿಮ್ಮ ಖಾತೆಗೆ ಜಮೆ ಮಾಡಲು ಐಟಿ ಸೇರಿದಂತೆ ವಿವಿಧ ಶುಲ್ಕಗಳನ್ನು ಪಾವತಿಸಲು ₹42.37 ಲಕ್ಷ ಪಾವತಿಸಬೇಕು ಎಂದಿದ್ದರು’ ಎಂದು ಪೊಲೀಸರು ಹೇಳಿದರು.
‘₹5.89 ಕೋಟಿ ಪಡೆದುಕೊಳ್ಳಲು ಆರೋಪಿ ಹೇಳಿದ ಬ್ಯಾಂಕ್ ಖಾತೆಗೆ ದೂರುದಾರರು ಹಂತ–ಹಂತವಾಗಿ ₹42.37 ಲಕ್ಷ ಪಾವತಿಸಿದ್ದಾರೆ. ಆದರೆ, ಯಾವುದೇ ರೀತಿ ಹಣ ಖಾತೆಗೆ ಜಮೆ ಆಗಿಲ್ಲ. ಆರೋಪಿಗಳನ್ನು ಸಂಪರ್ಕಕ್ಕೂ ಸಿಗಲಿಲ್ಲ. ಆದ್ದರಿಂದ ನನಗೆ ಮೋಸ ಮಾಡಿರುವ ಅಪರಿಚಿತ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರ ಪ್ರಕರಣ ದಾಖಲಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.