ADVERTISEMENT

ಕೋಟಿ ಕಂಠ ಗಾಯನಕ್ಕೆ 17 ಲಕ್ಷ ಕಾರ್ಮಿಕರು: ಶಿವರಾಂ ಹೆಬ್ಬಾರ್‌

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2022, 16:16 IST
Last Updated 12 ಅಕ್ಟೋಬರ್ 2022, 16:16 IST

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 1ರಂದು ನಡೆಯುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ರಾಜ್ಯದ 17,000 ಕಾರ್ಖಾನೆಗಳ 17 ಲಕ್ಷ ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ತಿಳಿಸಿದರು.

ಕೋಟಿ ಕಂಠ ಗಾಯನ ಕಾರ್ಯಕ್ರಮದ ಸಿದ್ಧತೆ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಈ ಕಾರ್ಯಕ್ರಮಕ್ಕೆ ಕಾರ್ಮಿಕ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತದೆ. ಕಾರ್ಮಿಕರು ಗಾಯನದಲ್ಲಿ ಭಾಗವಹಿಸುವುದಕ್ಕೆ ಪೂರಕವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್‌ ಕುಮಾರ್‌ ಮಾತನಾಡಿ, ‘ಕೋಟಿ ಕಂಠ ಗಾಯನದ ಯಶಸ್ಸಿಗಾಗಿ ಕಾರ್ಮಿಕ ಇಲಾಖೆಯಿಂದ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗುವುದು. ನೋಂದಣಿ ಹಾಗೂ ಪೂರ್ವಸಿದ್ಧತೆಗಳು ಆರಂಭವಾಗಿವೆ’ ಎಂದರು.

ADVERTISEMENT

ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಕಾರ್ಮಿಕ ಆಯುಕ್ತ ಅಕ್ರಂ ಪಾಷ ಹಾಗೂ ಕಟ್ಟಡ ಕಾರ್ಮಿಕರು ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುಪ್ರಸಾದ್ ಎಂ.ಪಿ., ಕೈಗಾರಿಕೆಗಳು ಮತ್ತು ಬಾಯ್ಲರ್ ನಿರ್ದೇಶಕ ಶ್ರೀನಿವಾಸ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.