ADVERTISEMENT

‘194 ಕ್ಷೇತ್ರದಲ್ಲಿ ಬಿಜೆಪಿಗೆ ಬೆಂಬಲ’

​ಪ್ರಜಾವಾಣಿ ವಾರ್ತೆ
Published 7 ಮೇ 2018, 20:08 IST
Last Updated 7 ಮೇ 2018, 20:08 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಬೆಂಗಳೂರು: ‘30 ಕ್ಷೇತ್ರಗಳಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್‌ ಇಂಡಿಯಾ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ. ಉಳಿದ 194 ಕ್ಷೇತ್ರಗಳಲ್ಲಿ ನಾವು ಬಿಜೆಪಿಗೆ ಬೆಂಬಲ ನೀಡಲಿದ್ದೇವೆ’ ಎಂದು ಕೇಂದ್ರ ಸಚಿವ ರಾಮದಾಸ್‌ ಅಠವಳೆ ಹೇಳಿದರು.

ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಿಜೆಪಿ ದಲಿತ ವಿರೋಧಿ ಪಕ್ಷ ಎಂದು ಬಿಂಬಿಸಲಾಗುತ್ತಿದೆ. ನರೇಂದ್ರ ಮೋದಿ ದಲಿತರಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಹಾಗಂತ ರಾಹುಲ್ ಗಾಂಧಿ ಕೂಡ ದಲಿತ ವಿರೋಧಿ ಅಲ್ಲ’ ಎಂದರು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕಾಂಗ್ರೆಸ್‌ ತನ್ನ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಇದು ಬಿಜೆಪಿಯ ಹುನ್ನಾರ ಎಂದು ಹೇಳುತ್ತಿದೆ’ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.