ADVERTISEMENT

₹2 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 20:17 IST
Last Updated 3 ಜುಲೈ 2019, 20:17 IST
ಸಚಿವ ಕೃಷ್ಣಬೈರೇಗೌಡ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಚ್.ಎಸ್.ದಯಾನಂದ್, ಎನ್.ಕೆ.ಮಹೇಶ್‌ ಕುಮಾರ್, ಕಾಂಗ್ರೆಸ್ ಮುಖಂಡರಾದ ಕೆ.ಅಶೋಕನ್, ಬಿ.ಕೆ.ಮಂಜುನಾಥಗೌಡ, ಶ್ರೀನಿವಾಸ್ ಇದ್ದಾರೆ.
ಸಚಿವ ಕೃಷ್ಣಬೈರೇಗೌಡ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಚ್.ಎಸ್.ದಯಾನಂದ್, ಎನ್.ಕೆ.ಮಹೇಶ್‌ ಕುಮಾರ್, ಕಾಂಗ್ರೆಸ್ ಮುಖಂಡರಾದ ಕೆ.ಅಶೋಕನ್, ಬಿ.ಕೆ.ಮಂಜುನಾಥಗೌಡ, ಶ್ರೀನಿವಾಸ್ ಇದ್ದಾರೆ.   

ಯಲಹಂಕ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆಯ ಎಂವಿಐಟಿ ಕ್ರಾಸ್‌ನಿಂದ ತಿಮ್ಮಸಂದ್ರ ಮಾರ್ಗವಾಗಿ ರಾಜಾನುಕುಂಟೆಯವರೆಗೆ ₹2 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಈ ರಸ್ತೆಯು ಸುಮಾರು 10 ಕಿ.ಮೀ ದೂರವಿದ್ದು, ಈಗಾಗಲೆ ಆರೇಳು ಕಿ.ಮೀ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಬಾಕಿಯಿರುವ ಮೂರ್ನಾಲ್ಕು ಕಿಲೋಮೀಟರ್ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣ ಮುಖ್ಯರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಈ ರಸ್ತೆಯನ್ನು ಸದಾ ಕಾಲ ಸುಸ್ಥಿತಿಯಲ್ಲಿಡುವ ಅವಶ್ಯಕತೆಯಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.