ADVERTISEMENT

ಬೆಂಗಳೂರು: ಲೈಂಗಿಕ ದೌರ್ಜನ್ಯ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 14:53 IST
Last Updated 16 ಜುಲೈ 2024, 14:53 IST
   

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಒಂದನೇ ಎಫ್‌ಟಿಎಸ್‌ಸಿ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದೆ.

ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ರಾಘವೇಂದ್ರ ಎಂಬಾತ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಮನೆಗೆ ಕರೆದು ಕೊಂಡು ಹೋಗಿ ಮದುವೆಯಾಗುವುದಾಗಿ ಲೈಂಗಿಕ ಕ್ರಿಯೆ ಸಹ ನಡೆಸಿದ್ದ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಸಂತ್ರಸ್ತೆಯ ತಂದೆ ಪೊಲೀಸರಿಗೆ ಈ ವಿಷಯ ತಿಳಿಸಿದರು. ಆರೋಪಿ ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದರು. ತನಿಖಾಧಿಕಾರಿ ಸಿದ್ದರಾಜು ದೋಷಾರೋಪ ಪಟ್ಟಿ ಸಲ್ಲಿಸಿದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು 20 ವರ್ಷ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಐಪಿಸಿ ಕಲಂ 363 ಅಡಿ 1 ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿದ್ದಾರೆ. ಬಾಲಕಿಗೆ ಡಿಎಲ್‌ಎಸ್‌ಯಿಂದ ₹5 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಅಭಿಯೋಜಕಿ ಎ.ಚಂದ್ರಕಲಾ ವಾದ ಮಂಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.