ADVERTISEMENT

20,996 ಗುಂಡಿ ಮುಚ್ಚಲಾಗಿದೆ ಲೋಕಾಯುಕ್ತಕ್ಕೆ ವರದಿ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 19:22 IST
Last Updated 26 ಅಕ್ಟೋಬರ್ 2017, 19:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದ ರಸ್ತೆಗಳಲ್ಲಿ 20,996 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ.

23,644 ಗುಂಡಿಗಳನ್ನು ಗುರುತಿಸಲಾಗಿದ್ದು, ಇನ್ನೂ 2,648 ಗುಂಡಿಗಳನ್ನು ಮುಚ್ಚುವುದು ಮಾತ್ರ ಬಾಕಿ ಇದೆ ಎಂದೂ ವರದಿಯಲ್ಲಿ ತಿಳಿಸಿದ್ದಾರೆ.

ಉಳಿದ ಗುಂಡಿಗಳನ್ನು ಮುಚ್ಚಿರುವ ಬಗ್ಗೆ ನ.10ರಂದು ಅಂತಿಮ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥಶೆಟ್ಟಿ ಆದೇಶಿಸಿದ್ದಾರೆ.

ADVERTISEMENT

ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತರು ವರದಿ ಸಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.