ಬೆಂಗಳೂರು: ಶುಕ್ರವಾರ ಒಂದೇ ದಿನದಲ್ಲೇ ನಗರದ 21ಪೊಲೀಸರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಸಿಬ್ಬಂದಿಯನ್ನು ಇತ್ತೀಚೆಗೆ ಸಾಮೂಹಿಕವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪೈಕಿ ಕಚೇರಿಯ ಅಪರಾಧ ದಾಖಲಾತಿ ವಿಭಾಗ, ನಮ್ಮ 100, ಆಡಳಿತ ವಿಭಾಗದ 9 ಸಿಬ್ಬಂದಿ ವರದಿಗಳು ಪಾಸಿಟಿವ್ ಬಂದಿವೆ.
ಠಾಣೆ ಸಿಬ್ಬಂದಿಯಲ್ಲೂ ಕೊರೊನಾ; ಅನ್ನಪೂರ್ಣೇಶ್ವರಿ ನಗರ ಠಾಣೆ ಎಸ್ಐ ಸೇರಿ 7 ಸಿಬ್ಬಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಇಬ್ಬರು ಸಿಬ್ಬಂದಿ, ಮಲ್ಲೇಶ್ವರ, ನಂದಿನಿ ಲೇಔಟ್, ರಾಜಗೋಪಾಲನಗರ ಠಾಣೆಯ ತಲಾ ಒಬ್ಬ ಸಿಬ್ಬಂದಿಗೆ ಸೋಂಕು ತಗುಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.