ADVERTISEMENT

ಕಪ್ಪು ಶಿಲೀಂಧ್ರ: 21 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 26 ಮೇ 2021, 21:50 IST
Last Updated 26 ಮೇ 2021, 21:50 IST
   

ಬೆಂಗಳೂರು: ನಗರದಲ್ಲಿ ಬುಧವಾರ ಮತ್ತೆ 21 ಮಂದಿಯಲ್ಲಿ ಕಪ್ಪು ಶಿಲೀಂಧ್ರ ಸೋಂಕು ದೃಢಪಟ್ಟಿದೆ. ಈ ಸೋಂಕಿನಿಂದ ಇಬ್ಬರು ಮೃತ‍ಪಟ್ಟಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಗೆ ಮೂರು ಮಂದಿ ಸೋಂಕಿಗೆ ಒಳಗಾದವರು ದಾಖಲಾಗಿದ್ದಾರೆ. ಚಿಕಿತ್ಸೆ ಪಡೆದುಕೊಳ್ಳುತ್ತಿದ್ದವರಲ್ಲಿ ಇಬ್ಬರು ಮರಣ ಹೊಂದಿದ್ದಾರೆ. ಸದ್ಯ ಅಲ್ಲಿ 58 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್ ಆಸ್ಪತ್ರೆಗೆ ಒಂದೇ ದಿನ 18 ಮಂದಿ ದಾಖಲಾಗಿದ್ದಾರೆ. ಇಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಚಿಕಿತ್ಸೆ ಪಡೆದುಕೊಳ್ಳುತ್ತಿದ್ದವರಲ್ಲಿ ಇಬ್ಬರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT