ADVERTISEMENT

220 ಕೆ.ಜಿ. ಪ್ಲಾಸ್ಟಿಕ್‌ ವಶ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 19:52 IST
Last Updated 24 ನವೆಂಬರ್ 2022, 19:52 IST

ಬೆಂಗಳೂರು:ನಗರದ ಯಶವಂತಪುರ ಮಾರುಕಟ್ಟೆ ಹಾಗೂ ಜಾಲಹಳ್ಳಿ ಜೆ.ಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಪಾಲಿಕೆ ಹಾಗೂ ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 220 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು, ₹5,800 ದಂಡ ವಿಧಿಸಿದ್ದಾರೆ.

ಜಾಲಹಳ್ಳಿಯ ಪೊಲೀಸ್ ಠಾಣೆ ಹಿಂಭಾಗ ಶ್ರೀ ಗಣೇಶ ಎಂಟರ್‌ಪ್ರೈಸಸ್‌ ಎಂಬ ಹೆಸರಿನಲ್ಲಿ ಪ್ಲಾಸ್ಟಿಕ್ ಕೋಟೆಡ್ ಪೇಪರ್ ಪ್ಲೇಟ್ ತಯಾರಿಕಾ ಘಟಕಕ್ಕೆ ತಂಡ ಹೋದಾಗ, ಘಟಕದವರು ಒಳಗಿನಿಂದ ಬೀಗ ಹಾಕಿಕೊಂಡರು. ಮಾರ್ಷಲ್‌ ತಂಡ ಹೊರಗಿನಿಂದ ಬೀಗ ಹಾಕಲು ಮುಂದಾದಾಗ ವಾಗ್ವಾದ ನಡೆಯಿತು. ನಂತರ ಘಟಕದಲ್ಲಿದ್ದ ಸುಮಾರು 20 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಯಿತು.

ಕೆ.ಆರ್.ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶ, ಹೂವಿನ ಮಾರುಕಟ್ಟೆಯಲ್ಲಿ ಹಾಗೂ ಬೀದಿಬದಿ ವ್ಯಾಪಾರಿಗಳ ಬಳಿ ತಪಾಸಣೆ ನಡೆಸಿದ ವೇಳೆ ಸುಮಾರು 25 ಕೆ.ಜಿ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಮತ್ತೆ ಕವರ್‌ಗಳನ್ನು ಬಳಸದಂತೆ ಎಚ್ಚರಿಕೆ ನೀಡಿ ತಲಾ ₹200 ದಂಡ ವಿಧಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.