ADVERTISEMENT

ಜಿಬಿಎ ವ್ಯಾಪ್ತಿಯಲ್ಲಿ ಮೊದಲ ದಿನ 22 ಸಾವಿರ ಮನೆ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 16:12 IST
Last Updated 4 ಅಕ್ಟೋಬರ್ 2025, 16:12 IST
ಜಿಬಿಎ
ಜಿಬಿಎ   

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ 22,141 ಮನೆಗಳಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶನಿವಾರ ಪೂರ್ಣಗೊಂಡಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಮನೆಗಳ ಸಮೀಕ್ಷೆ ಕಾರ್ಯ ಶನಿವಾರ ಆರಂಭವಾಗಿದೆ.

ಕೇಂದ್ರ ನಗರ ಪಾಲಿಕೆಯಲ್ಲಿ 2,822, ಪೂರ್ವ ನಗರ ಪಾಲಿಕೆಯಲ್ಲಿ 3,105, ಉತ್ತರ ನಗರ ಪಾಲಿಕೆಯಲ್ಲಿ 5,987,  ದಕ್ಷಿಣ ನಗರ ಪಾಲಿಕೆಯಲ್ಲಿ 3,145, ಪಶ್ಚಿಮ ನಗರ ಪಾಲಿಕೆಯಲ್ಲಿ 7,082 ಮನೆಗಳಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಜಿಬಿಎ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.