ADVERTISEMENT

₹2.37 ಕೋಟಿ ವೆಚ್ಚದ ಬೀಜ ಪ್ರಮಾಣೀಕರಣ ಭವನ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2018, 20:07 IST
Last Updated 8 ಮಾರ್ಚ್ 2018, 20:07 IST
ಕೃಷ್ಣಬೈರೇಗೌಡ ಅವರು ಕಟ್ಟಡ ಉದ್ಘಾಟಿಸಿದರು. ಶಾಸಕ ವೈ.ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಕೆ.ಶ್ರಿನಿವಾಸಯ್ಯ, ಜೆ.ಮುನೇಗೌಡ ಹಾಗೂ ಸ್ಥಳೀಯ ಮುಖಂಡರು ಇದ್ದಾರೆ.
ಕೃಷ್ಣಬೈರೇಗೌಡ ಅವರು ಕಟ್ಟಡ ಉದ್ಘಾಟಿಸಿದರು. ಶಾಸಕ ವೈ.ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಕೆ.ಶ್ರಿನಿವಾಸಯ್ಯ, ಜೆ.ಮುನೇಗೌಡ ಹಾಗೂ ಸ್ಥಳೀಯ ಮುಖಂಡರು ಇದ್ದಾರೆ.   

ಬೆಂಗಳೂರು: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯು ಹೆಬ್ಬಾಳದಲ್ಲಿ ನಿರ್ಮಿಸಿರುವ ಬೀಜ ಪ್ರಮಾಣೀಕರಣ ಭವನವನ್ನು ಕೃಷಿ ಸಚಿವ ಕೃಷ್ಣ ಬೈರೇಗೌಡ ಉದ್ಘಾಟಿಸಿದರು.

ಸಂಸ್ಥೆಯ ಅಧ್ಯಕ್ಷ ಕೆ.ಶ್ರೀನಿವಾಸಯ್ಯ, ‘₹2.37 ಕೋಟಿ ವೆಚ್ಚದಲ್ಲಿ ಈ ಭವನ ನಿರ್ಮಾಣ ಮಾಡಲಾಗಿದೆ. ತಂತ್ರಜ್ಞಾನ ಮತ್ತು ಪ್ರಯೋಗಾಲಯದ ಸಭಾಭವನ ಹಾಗೂ ಡಿಎನ್ಎ ಪ್ರಯೋಗಾಲಯವನ್ನು ನಿರ್ಮಿಸಲಾಗಿದೆ’ ಎಂದರು.

ಬೀಜ ಪ್ರಮಾಣೀಕರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ಕೈಗೊಳ್ಳುವ ಉದ್ದೇಶದಿಂದ ಪ್ರಮಾಣೀಕರಣ ತಂತ್ರಾಂಶವನ್ನು ಅಳವಡಿಸಿಕೊಂಡಿದ್ದೇವೆ. ಸಂಸ್ಥೆಯ ಎಲ್ಲ ಕಾರ್ಯಗಳನ್ನು ಆನ್‌ಲೈನ್ ಮೂಲಕವೇ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ADVERTISEMENT

ಕೃಷಿ ಸಚಿವ ಕೃಷ್ಣಬೈರೇಗೌಡ, ‘ಮುಂಗಾರು ಹಾಗೂ ಹಿಂಗಾರು ಮಳೆಯಲ್ಲಿ 5 ವರ್ಷಗಳಿಂದ ಸಾಕಷ್ಟು ಏರುಪೇರು ಉಂಟಾಗಿದೆ. ಹೀಗಾಗಿ, ಕೃಷಿ ಉತ್ಪಾದನೆಯಲ್ಲಿ ವ್ಯತ್ಯಾಸವಾಗಿದೆ. ಆದರೂ, ಬಿತ್ತನೆ ಬೀಜದ ಕೊರತೆಯಾಗದಂತೆ ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.