ಬೆಂಗಳೂರು: ಬಿಎಂಟಿಸಿ ಬಸ್‌ಗಳಲ್ಲಿ ಮಾರ್ಚ್ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 2,820 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.
ಮಾರ್ಚ್ ತಿಂಗಳಲ್ಲಿ 18,051 ಟ್ರಿಪ್‌ಗಳನ್ನು ತಪಾಸಣೆ ನಡೆಸಲಾಗಿತ್ತು. ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದವರನ್ನು ಪತ್ತೆ ಹಚ್ಚಿ ಅವರಿಂದ ₹ 6,40,035 ದಂಡ ವಸೂಲಿ ಮಾಡಲಾಯಿತು. ಕರ್ತವ್ಯ ಲೋಪವೆಸಗಿದ ಕಾರಣಕ್ಕಾಗಿ ಸಂಸ್ಥೆಯ 1,613 ನಿರ್ವಾಹಕರ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿದ 310 ಪುರುಷ ಪ್ರಯಾಣಿಕರಿಗೆ ₹ 5,31,000 ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.