ADVERTISEMENT

2 ಎ ಮೀಸಲಾತಿಗೆ ಬಲಿಜರ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಜನವರಿ 2023, 20:07 IST
Last Updated 23 ಜನವರಿ 2023, 20:07 IST

ಬೆಂಗಳೂರು: ಬಲಿಜ ಸಮುದಾಯಕ್ಕೆ ಪೂರ್ಣಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ಸಮಗ್ರ ಬಲಿಜ ವೇದಿಕೆ ಆಗ್ರಹಿಸಿದೆ.

‘ಚನ್ನಪ್ಪರೆಡ್ಡಿ ಹಾಗೂ ಹಾವನೂರು ಆಯೋಗದ ವರದಿಯಲ್ಲಿ ಬಲಿಜ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಸೌಲಭ್ಯವನ್ನು ನೀಡಬೇಕೆಂದು ಈಗಾಗಲೇ ಸರ್ಕಾರಕ್ಕೆ ಶಿಫಾರಸು ಮಾಡಿವೆ. ಆದ್ದರಿಂದ, ಸರ್ಕಾರ ಬಜೆಟ್‌ಗೂ ಮುನ್ನ ಪೂರ್ಣಪ್ರಮಾಣದ 2ಎ ಮೀಸಲಾತಿ ಘೋಷಿಸಬೇಕು’ ಎಂದು ವೇದಿಕೆ ಪ್ರಧಾನ ಕಾರ್ಯದರ್ಶಿ ಎಸ್. ರಮೇಶ ಆಗ್ರಹಿಸಿದ್ದಾರೆ.

‘ವಿಧಾನಸಭೆಯ ಚುನಾವಣೆಯ 54 ಕ್ಷೇತ್ರಗಳಲ್ಲಿ ಬಲಿಜ ಜನಾಂಗದ ಮತಗಳು ನಿರ್ಣಾಯಕ ಪಾತ್ರವಹಿಸುತ್ತವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಸಮುದಾಯದ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡಬೇಕು’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.