ADVERTISEMENT

ವಾರದಲ್ಲಿ ₹ 3.81 ಕೋಟಿ ದಂಡ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 18:29 IST
Last Updated 2 ನವೆಂಬರ್ 2020, 18:29 IST

ಬೆಂಗಳೂರು: ನಗರದಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಅ. 25ರಿಂದ 31ರ ಅವಧಿಯಲ್ಲಿ ₹ 3.81 ಕೋಟಿ ದಂಡ ಸಂಗ್ರಹಿಸಿದ್ದಾರೆ.

‘ಸಂಚಾರ ನಿಯಮ ಉಲ್ಲಂಘಿಸುವವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಒಂದೇ ವಾರದಲ್ಲಿ 89,957 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೆಲವರ ವಾಹನಗಳನ್ನೂ ಜಪ್ತಿ ಮಾಡಲಾಗಿದೆ’ ಎಂದು ಜಂಟಿ ಕಮಿಷನರ್ (ಸಂಚಾರ) ಬಿ.ಆರ್. ರವಿಕಾಂತೇಗೌಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT