ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಕ್ವಾಲಾಲಂಪುರ, ದುಬೈ, ಕೊಲಂಬೊದಿಂದ ಬಂದ ನಾಲ್ವರು ಪ್ರಯಾಣಿಕರಿಂದ ಮೂರು ಚಿನ್ನದ ಬಿಸ್ಕತ್ತು ಸೇರಿದಂತೆ ಒಟ್ಟು ₹ 1.76 ಕೋಟಿ ಮೌಲ್ಯದ 3 ಕೆ.ಜಿ. ಚಿನ್ನವನ್ನು ಜಪ್ತಿ ಮಾಡಲಾಗಿದೆ.
ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.