ADVERTISEMENT

ಬಿಡಿಎ: ₹30 ಕೋಟಿ ಮೌಲ್ಯದ ಆಸ್ತಿ ವಶ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 19:39 IST
Last Updated 8 ಜುಲೈ 2022, 19:39 IST
ಬಿಟಿಎಂ ಬಡಾವಣೆಯಲ್ಲಿ ಮುಕ್ಕಾಲು ಎಕರೆ ಪ್ರದೇಶದ ಅತಿಕ್ರಮಣವನ್ನು ಬಿಡಿಎ ವತಿಯಿಂದ ಶುಕ್ರವಾರ ತೆರವುಗೊಳಿಸಲಾಯಿತು
ಬಿಟಿಎಂ ಬಡಾವಣೆಯಲ್ಲಿ ಮುಕ್ಕಾಲು ಎಕರೆ ಪ್ರದೇಶದ ಅತಿಕ್ರಮಣವನ್ನು ಬಿಡಿಎ ವತಿಯಿಂದ ಶುಕ್ರವಾರ ತೆರವುಗೊಳಿಸಲಾಯಿತು   

ಬೆಂಗಳೂರು: ಬಿಟಿಎಂ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಮುಕ್ಕಾಲು ಎಕರೆ ಪ್ರದೇಶದ ಅತಿಕ್ರಮಣವನ್ನು ಬಿಡಿಎ ಅಧಿಕಾರಿಗಳು ಶುಕ್ರವಾರ ತೆರವುಗೊಳಿಸಿದರು.

ಬಿಳೇಕಹಳ್ಳಿಯ ಸರ್ವೆ ಸಂಖ್ಯೆ 172/2ಎರಲ್ಲಿ ಬಿಟಿಎಂ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಜಾಗ ಸ್ವಾಧೀನಪಡಿಸಿಕೊಂಡಿತ್ತು. ಮುಕ್ಕಾಲು ಎಕರೆ ಪ್ರದೇಶದಲ್ಲಿ ಒತ್ತುವರಿದಾರರು ಒಂದು ತಾತ್ಕಾಲಿಕ ಶೆಡ್, ನರ್ಸರಿ ಮತ್ತು ಕಟ್ಟಡ ನಿರ್ಮಾಣ ಸರಕುಗಳನ್ನು ತುಂಬಿದ್ದರು. ಹಲವು ಬಾರಿ ಬಿಡಿಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಒತ್ತುವರಿದಾರರು ಶೆಡ್ ಮತ್ತು ಇತರೆ ನಿರ್ಮಾಣಗಳನ್ನು ತೆರವುಗೊಳಿಸಿರಲಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಬಿಡಿಎ ಪರ ತೀರ್ಪು ನೀಡಿತ್ತು. ಹೀಗಾಗಿ ಕಾರ್ಯಾಚರಣೆ ನಡೆಸಿ, ಜಾಗವನ್ನು ಬಿಡಿಎ ವಶಕ್ಕೆ ತೆಗೆದುಕೊಂಡಿದೆ.

ಬಿಡಿಎ ವಿಶೇಷ ಕಾರ್ಯಪಡೆ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮತ್ತು ಇನ್‌ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್‌ನಲ್ಲಿ ಕಾರ್ಯಪಾಲಕ ಎಂಜಿನಿಯರ್‌ ಸುರೇಶ್ ಮತ್ತು ರವಿನಂದನ್ ಕಾರ್ಯಾಚರಣೆ ನಡೆಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.