
ಪ್ರಜಾವಾಣಿ ವಾರ್ತೆ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿವಿಧ ಬ್ಯಾರಕ್‌ಗಳಲ್ಲಿ ಗುರುವಾರ ರಾತ್ರಿ ನಡೆದ ತಪಾಸಣೆ ವೇಳೆ 30 ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಮಹಾನಿರ್ದೇಶಕ ಅಲೋಕ್‌ಕುಮಾರ್ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಜೈಲಿನ ವಿವಿಧ ಬ್ಯಾರಕ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಎಸ್‌ಪಿ ಅಂಶುಕುಮಾರ್ ಹಾಗೂ ಜೈಲರ್ ಶಿವಕುಮಾರ್ ನೇತೃತ್ವದ ತಂಡವು ಗುರುವಾರ ರಾತ್ರಿಯೂ ತಪಾಸಣೆ ನಡೆಸಿತು. ಮುಂದಿನ ದಿನಗಳಲ್ಲೂ ಇದೇ ರೀತಿಯ ಕಾರ್ಯಾಚರಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.