ADVERTISEMENT

ಕಳ್ಳತನ ಮಾಡಿದ್ದ 30 ಲ್ಯಾಪ್‌ಟಾಪ್‌, ಐ–ಫೋನ್‌ ಜಪ್ತಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 16:27 IST
Last Updated 1 ಜುಲೈ 2025, 16:27 IST
<div class="paragraphs"><p>ಐ–ಫೋನ್‌ </p></div>

ಐ–ಫೋನ್‌

   

ಬೆಂಗಳೂರು: ಕಂಪನಿ ದಾಸ್ತಾನು ಕೊಠಡಿಯಲ್ಲಿದ್ದ ಲ್ಯಾಪ್‌ಟಾಪ್‌ ಹಾಗೂ ಐ–ಫೋನ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯಿಂದ 30 ಲ್ಯಾಪ್‌ಟಾಪ್‌ ಹಾಗೂ ಐದು ಐ–ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹19 ಲಕ್ಷ ಎಂದು ಅಂದಾಜಿಸಲಾಗಿದೆ. ಆರೋಪಿಯ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಎಲೆಕ್ಟ್ರಾನಿಕ್‌ ಸಿಟಿ ಎರಡನೇ ಹಂತದಲ್ಲಿರುವ ಕಂಪನಿಯ ಹಿರಿಯ ವ್ಯವಸ್ಥಾಪಕ ನೀಡಿದ ದೂರು ಆಧರಿಸಿ, ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ವಶಕ್ಕೆ ಪಡೆದುಕೊಂಡ ಆರೋಪಿ ಕಂಪನಿಯ ದಾಸ್ತಾನು ಕೊಠಡಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ. ಆ ಕೊಠಡಿಯಲ್ಲಿದ್ದ 56 ಲ್ಯಾಪ್‌ಟಾಪ್‌ ಹಾಗೂ 16 ಐ–ಫೋನ್ ಕಳ್ಳತನ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

‘ವಶಕ್ಕೆ ಪಡೆದುಕೊಂಡಿರುವ ಆರೋಪಿಯು ಆನ್‌ಲೈನ್‌ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದ. ಹೀಗಾಗಿ. ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಕಳ್ಳತನ ಮಾಡಿದ್ದ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.