ADVERTISEMENT

ಬೆಂಗಳೂರಿನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ: ಕೃತ್ಯದಲ್ಲಿ ಮೂವರು ಮಹಿಳೆಯರು ಭಾಗಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2022, 4:46 IST
Last Updated 4 ಡಿಸೆಂಬರ್ 2022, 4:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವ್ಯಕ್ತಿಯೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಕೆ.ಪಿ. ಅಗ್ರಹಾರದ 5ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

30 ವರ್ಷದ ವ್ಯಕ್ತಿಯೊಬ್ಬರನ್ನು ಶನಿವಾರ ತಡರಾತ್ರಿ ಕೊಲೆ ಮಾಡಲಾಗಿದೆ. ಕೃತ್ಯದಲ್ಲಿ ಮೂವರುಮಹಿಳೆಯರು ಸೇರಿದಂತೆ 6 ಜನರು ಭಾಗಿಯಾಗಿದ್ದಾರೆ ಎಂದು ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.

ADVERTISEMENT

ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.