ADVERTISEMENT

31ರಂದು ಮಹಿಳಾ ಮೋರ್ಚಾ ಸಮಾವೇಶ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2012, 19:30 IST
Last Updated 17 ಮಾರ್ಚ್ 2012, 19:30 IST

ಬೆಂಗಳೂರು: ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲು ಪಕ್ಷದ ವಿವಿಧ ಮೋರ್ಚಾಗಳ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ಹೆಜ್ಜೆಯಾಗಿ ಮಹಿಳಾ ಮೋರ್ಚಾ ವತಿಯಿಂದ `ನಾರಿ ಶಕ್ತಿ ಸಂಗಮ~ ಸಮಾವೇಶ ಇದೇ 31ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.

ಮಹಿಳಾ ಮೋರ್ಚಾ ಸಮಾವೇಶಕ್ಕೆ ಪೂರ್ವಭಾವಿಯಾಗಿ ಶನಿವಾರ ಆಯೋಜಿಸಲಾಗಿದ್ದ ಭೂಮಿ ಪೂಜೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `31ರಂದು ನಡೆಯುವ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೂ ಪಾಲ್ಗೊಳ್ಳಲಿದ್ದಾರೆ.

ವಿವಿಧ ಮೋರ್ಚಾಗಳು ಒಂದಾಗಿ ಮೇ 26ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲಿವೆ. ಅದರಲ್ಲಿ ಅಂದಾಜು ಆರು ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ~ ಎಂದು ತಿಳಿಸಿದರು.ಏಪ್ರಿಲ್ 7ರಂದು ಮೈಸೂರಿನಲ್ಲಿ ದಲಿತ ಮೋರ್ಚಾ ವತಿಯಿಂದ ಬೃಹತ್ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.

`ನಾರಿ ಶಕ್ತಿ ಸಂಗಮ~ ಸಮಾವೇಶದಲ್ಲಿ 30 ಸಾವಿರ ಮಹಿಳೆಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ರೀನಾ ಪ್ರಕಾಶ್ ತಿಳಿಸಿದರು.
ಇಂಧನ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ತಿನ ಉಪಸಭಾಪತಿ ವಿಮಲಾ ಗೌಡ ಮತ್ತಿತರರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.