ADVERTISEMENT

ಗುತ್ತಿಗೆ ಆಧಾರದಲ್ಲಿ 337 ತಜ್ಞ ವೈದ್ಯರ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2024, 15:25 IST
Last Updated 15 ಫೆಬ್ರುವರಿ 2024, 15:25 IST
ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌   

ಬೆಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಖಾಲಿ ಇರುವ 337 ತಜ್ಞ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಕಾಂಗ್ರೆಸ್‌ನ ಬೇಳೂರು ಗೋಪಾಲಕೃಷ್ಣ ಪ್ರಶ್ನೆಗೆ ವಿಧಾನಸಭೆಯಲ್ಲಿ ಗುರುವಾರ ಉತ್ತರಿಸಿದ ಸಚಿವರು, ‘337 ತಜ್ಞ ವೈದ್ಯರು ಮತ್ತು 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲು ಅನುಮತಿ ನೀಡಲಾಗಿದೆ. ಶೀಘ್ರದಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು’ ಎಂದರು.

ಅನುದಾನದ ಕೊರತೆ: ಜೆಡಿಎಸ್‌ನ ಸಿ.ಎನ್‌. ಬಾಲಕೃಷ್ಣ ಪ್ರಶ್ನೆಗೆ ಉತ್ತರಿಸಿದ ದಿನೇಶ್‌, ‘ರಾಜ್ಯದಲ್ಲಿ ಆಸ್ಪತ್ರೆಗಳ ಕಟ್ಟಡ ನಿರ್ವಹಣೆಗೆ ವರ್ಷಕ್ಕೆ ₹25 ಕೋಟಿ ಮಾತ್ರ ಅನುದಾನ ನೀಡಲಾಗುತ್ತಿದೆ. ಇದರಿಂದಾಗಿ ಆಸ್ಪತ್ರೆಗಳ ಕಟ್ಟಡಗಳ ನಿರ್ವಹಣೆಗೆ ಸಮಸ್ಯೆಯಾಗಿದೆ. ಹೆಚ್ಚಿನ ಅನುದಾನ ಒದಗಿಸುವಂತೆ ಕೋರಲಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.