ADVERTISEMENT

₹361 ಕೋಟಿ ಆಸ್ತಿ ತೆರಿಗೆ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2018, 19:01 IST
Last Updated 22 ಏಪ್ರಿಲ್ 2018, 19:01 IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸಕ್ತ ಆರ್ಥಿಕ ವರ್ಷ ಆರಂಭವಾದ 20 ದಿನಗಳಲ್ಲಿ ₹361 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ.

2018–19ನೇ ಸಾಲಿನ ಆಸ್ತಿ ತೆರಿಗೆಯನ್ನು ಇದೇ 30ರೊಳಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿದರೆ ಶೇ 5ರಷ್ಟು ರಿಯಾಯಿತಿ ನೀಡುವುದಾಗಿ ಪಾಲಿಕೆಯು ಘೋಷಿಸಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈವರೆಗೆ ಸುಮಾರು 2 ಲಕ್ಷ ಮಂದಿ ಆಸ್ತಿ ತೆರಿಗೆ ಪಾವತಿಸಿದ್ದಾರೆ.

ಚಲನ್‌ ಮೂಲಕ ₹215 ಕೋಟಿ ಹಾಗೂ ಆನ್‌ಲೈನ್‌ ಮೂಲಕ ₹146 ಕೋಟಿ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅತಿ ಹೆಚ್ಚು ತೆರಿಗೆ ಸಂಗ್ರಹವಾಗಿದೆ. ಆನ್‌ಲೈನ್‌ ವ್ಯವಸ್ಥೆಯನ್ನು ಸರಳೀಕರಿಸುವ ಜತೆಗೆ ಗೊಂದಲಗಳನ್ನು ಪರಿಹರಿಸಲಾಗಿದೆ. ಹೀಗಾಗಿ, ಆನ್‌ಲೈನ್‌ ಮೂಲಕ ತೆರಿಗೆ ಪಾವತಿ ಪ್ರಮಾಣ ಹೆಚ್ಚಾಗಿದೆ ಎಂದು ಪಾಲಿಕೆ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.

ADVERTISEMENT

ಕಳೆದ ವರ್ಷ ಆನ್‌ಲೈನ್‌ ವ್ಯವಸ್ಥೆಯಲ್ಲಿ ಗೊಂದಲ ಉಂಟಾಗಿದ್ದರಿಂದ ಶೇ 5ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ಬಾರಿ ರಿಯಾಯಿತಿ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.