ADVERTISEMENT

ನಾಲ್ವರಿಗೆ ಪಿಎಚ್‌.ಡಿ ಪದವಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2019, 20:03 IST
Last Updated 3 ಫೆಬ್ರುವರಿ 2019, 20:03 IST
ಶೇಖರ್‌ ಅಂಗಡಿ
ಶೇಖರ್‌ ಅಂಗಡಿ   

ಬೆಂಗಳೂರು: ಭೂಗೋಳಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶೇಖರ್ ಅಂಗಡಿ ಅವರು, ಪ್ರೊ.ಡಾ.ಎ.ಎಸ್.ರಾಯಮಾನೆ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್‌.ಡಿ ಪದವಿ ನೀಡಿದೆ.

ವೇದಾವತಿ: ಭೌತಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ವೇದಾವತಿ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿಶ್ವ ವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿದೆ. ಇವರಿಗೆ ಪ್ರೊ.ಡಾ.ವಿಜಯಕುಮಾರ್ ಎಚ್.ದೊಡ್ಡಮನಿ ಅವರು ಮಾರ್ಗದರ್ಶಕರಾಗಿದ್ದರು.

ಎನ್.ಎಸ್.ಶೋಭಾ: ಬೆಂಗಳೂರು ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಎನ್.ಎಸ್.ಶೋಭಾ ಅವರು, ಪ್ರೊ.ಡಾ.ಕೆ.ಜನಾರ್ದನ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿ
ದ್ದರು. ಈ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.

ADVERTISEMENT

ಚನ್ನವೀರಯ್ಯ: ಆಚಾರ್ಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಚನ್ನವೀರಯ್ಯ ಅವರು, ಬೆಂಗ ಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಡಿ.ಕೆ.ಚಿತ್ತಯ್ಯಪೂಜಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಬೆಂಗಳೂರು ವಿವಿ ಪಿಎಚ್‍.ಡಿ ಪದವಿಯನ್ನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.