ADVERTISEMENT

₹ 40 ಲಕ್ಷ ಮೌಲ್ಯದ ದ್ವಿಚಕ್ರ ವಾಹನ ವಶ: ಐವರ ಬಂಧನ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 5:14 IST
Last Updated 14 ಸೆಪ್ಟೆಂಬರ್ 2022, 5:14 IST
ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿರುವ ದ್ವಿಚಕ್ರವಾಹನಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮತ್ತು ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪುರುಷೋತ್ತಮ್ ಪರಿಶೀಲಿಸಿದರು
ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿರುವ ದ್ವಿಚಕ್ರವಾಹನಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮತ್ತು ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪುರುಷೋತ್ತಮ್ ಪರಿಶೀಲಿಸಿದರು   

ಆನೇಕಲ್: ತಾಲ್ಲೂಕಿನ ಸರ್ಜಾಪುರ ಠಾಣೆ ಪೊಲೀಸರು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ₹ 40 ಲಕ್ಷ ಬೆಲೆ ಬಾಳುವ 25 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಮೂಕಂಡಪಲ್ಲಿಯ ಪ್ರಕಾಶ್‌ರಾಜ್‌ (25), ಚೊಕ್ಕರಸನಹಳ್ಳಿಯ ಗೋಪಿ (20), ಕೊತ್ತಪಲ್ಲಿಯ ನವೀನ್‌ಕುಮಾರ್‌ (24), ಹೊಸಕೋಟೆಯ ಮಹಮ್ಮದ್‌ ಶಾಹಿದ್‌ (24) ಮತ್ತು ಆನೇಕಲ್‌ ತಾಲ್ಲೂಕಿನ ತಿರುಪಾಳ್ಯದ ನಂದೀಶ್‌ (19) ಬಂಧಿತರು.

ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಆರೋಪಿಗಳು ಹಂದೇನಹಳ್ಳಿ ಸಮೀ ಪದ ಕ್ರಾಂತಿ ಲೇಔಟ್‌ನಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸರ್ಜಾಪುರ ಪೊಲೀಸರು ದಾಳಿ ನಡೆಸಿದಾಗ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ತನಖೆ ನಡೆಸಿದಾಗ ಆರೋಪಿಗಳು ಸುತ್ತಮುತ್ತಲಿನ ಪ್ರದೇಶದಲ್ಲಿ ದ್ವಿಚಕ್ರವಾಹನಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.