ಬೆಂಗಳೂರು: ವಿದೇಶದಿಂದ ಉಡುಗೊರೆ ಬಂದಿರುವುದಾಗಿ ಹೇಳಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದ್ದ ವಂಚಕರು, ಶುಲ್ಕದ ಹೆಸರಿನಲ್ಲಿ ನಗರದ ಮಹಿಳೆಯೊಬ್ಬರಿಂದ ₹ 4.74 ಲಕ್ಷ ಪಡೆದು ವಂಚಿಸಿದ್ದಾರೆ.
‘ಯಲಹಂಕ ನ್ಯೂಟೌನ್ ನಿವಾಸಿಯಾಗಿರುವ 35 ವರ್ಷದ ಮಹಿಳೆ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಮಹಿಳೆಗೆ ಕರೆ ಮಾಡಿದ್ದ ಆರೋಪಿಗಳು, ‘ನಿಮ್ಮ ಹೆಸರಿಗೆ ಇಂಗ್ಲೆಂಡ್‌ನಿಂದ ಉಡುಗೊರೆ ಬಂದಿದೆ. ಕರೆನ್ಸಿ ಹಾಗೂ ಬೆಲೆ ಬಾಳುವ ಚಿನ್ನದ ಆಭರಣಗಳಿವೆ. ಅದನ್ನು ನಿಮ್ಮ ವಿಳಾಸಕ್ಕೆ ಕಳುಹಿಸಲು ಕೆಲ ಶುಲ್ಕ ಹಾಗೂ ಜಿಎಸ್‌ಟಿ ಪಾವತಿ ಮಾಡಬೇಕು’ ಎಂದಿದ್ದರು. ಅದನ್ನು ನಂಬಿದ್ದ ಮಹಿಳೆ, ಆರೋಪಿ ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹ 4.74 ಲಕ್ಷ ಹಾಕಿದ್ದರು. ಈ ಸಂಗತಿ ದೂರಿನಲ್ಲಿದೆ, ಹಣ ಪಡೆದ ನಂತರ ಆರೋಪಿ, ಯಾವುದೇ ಉಡುಗೊರೆ ಕಳುಹಿಸಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆ ಯಾಗಿದ್ದಾನೆ’ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.