ADVERTISEMENT

₹4.85 ಕೋಟಿ ವೆಚ್ಚದ ಸೇತುವೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2018, 19:37 IST
Last Updated 23 ಫೆಬ್ರುವರಿ 2018, 19:37 IST

ಬೆಂಗಳೂರು: ಮೈಸೂರು ರಸ್ತೆಯ ಪಟ್ಟಣಗೆರೆ ಬಳಿ ವೃಷಾಭಾವತಿ ನದಿಗೆ ₹4.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆಯನ್ನು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಉದ್ಘಾಟಿಸಿದರು.

ಪೌರ ಕಾರ್ಮಿಕರನ್ನು ಖಾಯಂ ಮಾಡಿ ನೇರವಾಗಿ ಅವರ ಖಾತೆಗೆ ಹಣ ಜಮಾ ಮಾಡಲು ಸರ್ಕಾರ ಮುಂದಾಗಿದೆ. 2020ರ ಒಳಗೆ ತ್ಯಾಜ್ಯ ನೀರನ್ನು ಸಂಪೂರ್ಣವಾಗಿ ಸಂಸ್ಕರಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಬೆಂಗಳೂರು ಅಭಿವೃದ್ಧಿಗೆ ತಡೆಯಾಗಿದ್ದಾರೆ. ಹೂಡಿಕೆ ಮಾಡಲು ರಾಜ್ಯಕ್ಕೆ ಬರುವ ಕೈಗಾರಿಕೆಗಳ ಪ್ರತಿನಿಧಿಗಳಿಗೆ ಇಲ್ಲಸಲ್ಲದ್ದನ್ನು ಹೇಳಿ, ಬೇರೆ ರಾಜ್ಯಗಳಿಗೆ ಹೋಗುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಮೇಯರ್ ಆರ್. ಸಂಪತ್‍ರಾಜ್, ‘ಪಾಲಿಕೆ ವ್ಯಾಪ್ತಿಯ ಎಲ್ಲ ಉದ್ಯಾನಗಳು ಹಾಗೂ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರತಿ ವಾರ್ಡ್‌ನಲ್ಲಿಯೂ ಶುದ್ಧ ನೀರಿನ ಘಟಕ ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಪ್ರಮುಖ ರಸ್ತೆಗಳನ್ನು ಕಾಂಕ್ರೀಟ್ ಹಾಗೂ ಡಾಂಬರೀಕರಿಸಿದ ರಸ್ತೆಗಳನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.