ADVERTISEMENT

ರೈಲಿನಲ್ಲಿ 49 ಮೊಬೈಲ್ ಕದ್ದವನ ಸೆರೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 18:43 IST
Last Updated 11 ಜುಲೈ 2025, 18:43 IST
ಸೂರಜ್
ಸೂರಜ್   

ಬೆಂಗಳೂರು:  ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿ, ವಿವಿಧ ಕಂಪನಿಗಳ 49 ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಸೂರಜ್ ಪಾಸ್ವಾನ್ ಬಂಧಿತ ಆರೋಪಿ. ಈತನಿಂದ ₹28 ಲಕ್ಷ ಮೌಲ್ಯದ 13 ಐ-ಫೋನ್ ಸೇರಿದಂತೆ ವಿವಿಧ ಕಂಪನಿಗಳ 49 ಮೊಬೈಲ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯದಲ್ಲಿ ಮೂವರು ಪ್ರಮುಖ ಆರೋಪಿಗಳು ಭಾಗಿಯಾಗಿ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.

ವಶಪಡಿಸಿಕೊಂಡಿರುವ ಮೊಬೈಲ್‌ಗಳು. 

‘ಏಳು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿಯು ಮಾರತ್‌ ಹಳ್ಳಿಯಲ್ಲಿ ವಾಸವಾಗಿದ್ದ. ವಂದೇ ಭಾರತ್ ಹಾಗೂ ವಿಶೇಷ ಎಕ್ಸ್​​ಪ್ರೆಸ್ ರೈಲುಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.