ADVERTISEMENT

5 ಕೋಟಿಮೌಲ್ಯದಹೆರಾಯಿನ್ ವಶ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 19:20 IST
Last Updated 5 ಅಕ್ಟೋಬರ್ 2012, 19:20 IST

ಬೆಂಗಳೂರು: ಮಾದಕವಸ್ತು ನಿಯಂತ್ರಣಾ ಘಟಕದ (ಎನ್‌ಸಿಬಿ) ಬೆಂಗಳೂರು ವಲಯದ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿ, ಸುಮಾರು ಐದು ಕೋಟಿ ರೂಪಾಯಿ ಮೌಲ್ಯದ 4.97ಕೆ.ಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಆಧಾರದ ಮೇಲೆ  ಆಂಧ್ರಪ್ರದೇಶದ ತಿರುಪತಿಯಲ್ಲಿ ಮಂಗಳವಾರ (ಅ.2) ಕಾರ್ಯಾಚರಣೆ ನಡೆಸಲಾಯಿತು. ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ವೇಳೆ  ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು  ಬಂಧಿಸಲಾಯಿತು . ಬಂಧಿತರು ನಗರದಲ್ಲಿ ಹೆರಾಯಿನ್ ಮಾರಲು ಕಾರ್ಯತಂತ್ರ ರೂಪಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ: ಪಿಯುಸಿ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾನಗರದ 16ನೇ ಅಡ್ಡರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ರಾಮಕೃಷ್ಣ ಮಠದಲ್ಲಿ ಪೂಜಾರಿಯಾಗಿರುವ ಕೃಷ್ಣ ಎಂಬುವರ ಮಗಳು ವಿಜಯಶ್ರೀ (18) ಆತ್ಮಹತ್ಯೆ ಮಾಡಿಕೊಂಡವರು. ಅವರು, ಬಸವನಗುಡಿಯ ಎಪಿಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ರಾತ್ರಿ ಮಲಗುವುದಾಗಿ ಕೋಣೆಗೆ ಹೋದ ವಿಜಯಶ್ರೀ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಡರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.