ADVERTISEMENT

₹50ಲಕ್ಷ ವೆಚ್ಚದಲ್ಲಿ ಕೃಷಿಭವನ ನಿರ್ಮಾಣ: ಶಾಸಕ ಎಸ್.ಆರ್.ವಿಶ್ವನಾಥ್

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 20:04 IST
Last Updated 23 ಫೆಬ್ರುವರಿ 2020, 20:04 IST
ಯಲಹಂಕ ಶಾಸಕ ಎಸ್.ಅರ್.ವಿಶ್ವನಾಥ್ ಅವರು ಕೃಷಿಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಸಂತಲಕ್ಷ್ಮೀ ಇದ್ದರು
ಯಲಹಂಕ ಶಾಸಕ ಎಸ್.ಅರ್.ವಿಶ್ವನಾಥ್ ಅವರು ಕೃಷಿಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಸಂತಲಕ್ಷ್ಮೀ ಇದ್ದರು   

ಹೆಸರಘಟ್ಟ: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅನುದಾನದಿಂದ ನಿರ್ಮಿಸುತ್ತಿರುವ ಕೃಷಿ ಭವನಕ್ಕೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಶಂಕುಸ್ಥಾಪನೆ ನೇರವೇರಿಸಿದರು.

‘ಕೃಷಿ ಭವನವನ್ನು ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ₹35 ಲಕ್ಷವನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದರು.

‘ಕೊಡಗಿ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯನ್ನು ₹20 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುವುದು’ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ, ‘ಕೃಷಿ ಭವನದಲ್ಲಿ ಕೃಷಿಗೆ ಸಂಬಂಧಿಸಿ ಎಲ್ಲ ವಿಭಾಗಗಳು ಕಾರ್ಯನಿರ್ವಹಿಸಲಿವೆ. ಹೆಸರಘಟ್ಟ ಹೋಬಳಿಯ ಎಂಟು ಗ್ರಾಮ ಪಂಚಾಯಿತಿಗಳು ಇದರ ವ್ಯಾಪ್ತಿಗೆ ಒಳಪಡುತ್ತವೆ. ಕೃಷಿಕರು ಪ್ರತಿಯೊಂದಕ್ಕೂ ಯಲಹಂಕಕ್ಕೆ ಅಲೆದಾಡುವುದು ತಪ್ಪುತ್ತದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.