ADVERTISEMENT

ಬೆಂಗಳೂರು: 50 ಟ್ರಾಫಿಕ್ ಸಿಗ್ನಲ್ ಅಳವಡಿಕೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 17:47 IST
Last Updated 7 ಸೆಪ್ಟೆಂಬರ್ 2025, 17:47 IST
<div class="paragraphs"><p>ಟ್ರಾಫಿಕ್ ಜಾಮ್</p></div>

ಟ್ರಾಫಿಕ್ ಜಾಮ್

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ನಗರದಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆ ಮಾಡುವ ನಿಟ್ಟಿನಲ್ಲಿ ಕಳೆದ ಮೂರು ತಿಂಗಳಲ್ಲಿ ಹೊಸದಾಗಿ 50 ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಿದ್ದು, ಇದರೊಂದಿಗೆ ಟ್ರಾಫಿಕ್‌ ಸಿಗ್ನಲ್‌ಗಳ ಸಂಖ್ಯೆ 500 ದಾಟಿದೆ.

ADVERTISEMENT

ಈ ಪ್ರದೇಶಗಳಲ್ಲಿ ವಾಹನಗಳ ಸಂಖ್ಯೆಯ ವಿವರವಾದ ವಿಶ್ಲೇಷಣೆಯ ಬಳಿಕ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ.

‘ಸ್ಥಳೀಯ ಪೊಲೀಸ್‌ ಅಧಿಕಾರಿಗಳ ಶಿಫಾರಸಿನ ಮೇರೆಗೆ ಹೊಸ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ. ದಟ್ಟಣೆ ಹೆಚ್ಚಾದ ಕಾರಣ ಈ ಜಂಕ್ಷನ್‌ಗಳಲ್ಲಿ ಕೆಲವು ಕ್ರಮಗಳನ್ನು ಜಾರಿಗೆ ತರುವ ಅಗತ್ಯವಿದೆ’ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್‌ ಕಾರ್ತಿಕ್ ರೆಡ್ಡಿ ಹೇಳಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಮಾನ್ಯವಾಗಿದೆ. ಒಂದು ಕಾಲದಲ್ಲಿ ವಾಹನ ದಟ್ಟಣೆಯಿಂದ ಮುಕ್ತವಾಗಿದ್ದ ಅನೇಕ ರಸ್ತೆಗಳಲ್ಲಿ ಈಗ ದಟ್ಟಣೆ ಸಮಸ್ಯೆ ಎದುರಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.