ADVERTISEMENT

ಬೆಂಗಳೂರು: ಶಾಲಾ – ಕಾಲೇಜು ಬಳಿ ಅತಿವೇಗದ ಚಾಲನೆ, 510 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 21 ಜನವರಿ 2024, 14:21 IST
Last Updated 21 ಜನವರಿ 2024, 14:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಶಾಲಾ–ಕಾಲೇಜು ಬಳಿ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ(ಪೂರ್ವ) ಪೊಲೀಸರು, ಅತಿವೇಗ ಹಾಗೂ ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ 510ಕ್ಕಿಂತಲೂ ಹೆಚ್ಚಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಶಿಕ್ಷಣ ಸಂಸ್ಥೆಗಳ ಬಳಿ ವಿದ್ಯಾರ್ಥಿಗಳ ಪೋಷಕರು ಅತಿವೇಗ ಹಾಗೂ ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ.

ADVERTISEMENT

ನಿಯಮ ಉಲ್ಲಂಘಿಸುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಶಾಲಾ– ಕಾಲೇಜು ಬಳಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಂಚಾರ ವಿಭಾಗದ (ಪೂರ್ವ) ಡಿಸಿಪಿ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಅವರು ತಿಳಿಸಿದ್ದಾರೆ.

ಏಕಮುಖ ಸಂಚಾರ ರಸ್ತೆಗಳಲ್ಲಿ ವಿರುದ್ಧ ದಿಕ್ಕಿನಿಂದ ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ 154 ಪ್ರಕರಣ, ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ 328, ಬೈಕ್‌ನಲ್ಲಿ ಮೂವರು ಕುಳಿತು ಚಾಲನೆ ಮಾಡುತ್ತಿದ್ದವರ ವಿರುದ್ಧ 17, ಪಾದಚಾರಿ ಮಾರ್ಗದಲ್ಲಿ ಬೈಕ್‌ ಚಾಲನೆ ಮಾಡುತ್ತಿದ್ದವರ ವಿರುದ್ದ 11 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

510 ಪ್ರಕರಣಗಳಲ್ಲಿ 10 ಮಂದಿ ಬಾಲಕರಾಗಿದ್ದು, ಅವರಿಗೆ ವಾಹನ ನೀಡಿದ್ದ ಪೋಷಕರ ವಿರುದ್ಧ ಭಾರತೀಯ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಅಲ್ಲದೇ ಪೋಷಕರಿಗೂ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ತಿಳಿಸಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.