ADVERTISEMENT

24ಕ್ಕೆ ವಾಹನಗಳ ಹರಾಜು

​ಪ್ರಜಾವಾಣಿ ವಾರ್ತೆ
Published 3 ಜನವರಿ 2018, 19:53 IST
Last Updated 3 ಜನವರಿ 2018, 19:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಯಶವಂತಪುರ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯ ಆವರಣದಲ್ಲಿ ಇದೇ 24 ರಂದು ಮಧ್ಯಾಹ್ನ 3ಕ್ಕೆ ವಾರಸುದಾರರಿಲ್ಲದ ವಾಹನಗಳ ಹರಾಜು ಪ್ರಕ್ರಿಯೆ ನಡೆಯಲಿದೆ.

ನಗರದ ಬೇರೆ ಬೇರೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತೆರಿಗೆ ಪಾವತಿಸದ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಬಳಿಕ ಆ ವಾಹನಗಳನ್ನು ಬಿಡಿಸಿಕೊಳ್ಳಲು ವಾರಸುದಾರರು ವಿಫಲರಾಗಿದ್ದರು.

ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಪ್ರಾದೇಶಿಕ ಸಾರಿಗೆ ಆಯುಕ್ತರ ಹೆಸರಿನಲ್ಲಿ ₹5,000 ಡಿಡಿ ತೆಗೆಸಿ 24ರ ಮಧ್ಯಾಹ್ನ 3ರ ಒಳಗೆ ಕಚೇರಿಗೆ ತಲುಪಿಸಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.