ADVERTISEMENT

ರಾಜ್ಯ ಕಾಂಗ್ರೆಸ್‌ ನಾಯಕರ ಸಭೆ 13ರಂದು

​ಪ್ರಜಾವಾಣಿ ವಾರ್ತೆ
Published 5 ಜನವರಿ 2018, 19:33 IST
Last Updated 5 ಜನವರಿ 2018, 19:33 IST

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಸಭೆ ಇದೇ 13ರಂದು ದೆಹಲಿಯಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್‌, ಎಸ್‌.ಆರ್‌. ಪಾಟೀಲ, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿನ ಇತ್ತೀಚಿನ ವಿದ್ಯಮಾನ, ಪಕ್ಷ ಸಂಘಟನೆ ಮತ್ತು ಚುನಾವಣಾ ಪ್ರಚಾರ ದೃಷ್ಟಿಯಿಂದ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.