ADVERTISEMENT

ರುದ್ರೇಶ್‌ ಕೊಲೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 5 ಜನವರಿ 2018, 20:11 IST
Last Updated 5 ಜನವರಿ 2018, 20:11 IST
ರುದ್ರೇಶ್‌ ಕೊಲೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ರುದ್ರೇಶ್‌ ಕೊಲೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್   

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತನಿಖೆಗೆ ತಡೆ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಮುಕ್ತಾಯಗೊಳಿಸಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿವರವಾಗಿ ಅಲಿಸಿ, ತೀರ್ಪು ಕಾಯ್ದಿರಿಸಿತು.

ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್‌ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು.

ADVERTISEMENT

ಶಿವಾಜಿ ನಗರದಲ್ಲಿರುವ ಕಾಮರಾಜ ರಸ್ತೆಯಲ್ಲಿನ ಶ್ರೀನಿವಾಸ ಮೆಡಿಕಲ್‌ ಸ್ಟೋರ್ ಎದುರು ತನ್ನ ಸ್ನೇಹಿತರ ಜತೆ ನಿಂತಿದ್ದ ರುದ್ರೇಶ್‌ ಅವರನ್ನು ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕೊಲೆ ಮಾಡಿದ್ದರು. ಈ ಘಟನೆ 2016ರ ಅಕ್ಟೋಬರ್ 16ರಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.