ADVERTISEMENT

ಅಧಿಕಾರಿಗಳ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಮಾಹಿತಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2018, 19:30 IST
Last Updated 8 ಜನವರಿ 2018, 19:30 IST

ಬೆಂಗಳೂರು: ‘ಮೇಲ್ಮನವಿಗೆ ಅವಕಾಶ ನೀಡದೆ ಕಾಂಪೌಂಡ್‌ ಕೆಡವಲಾಗಿದೆ’ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಡಿ.ಬಿ.ನಟೇಶ್‌ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಎಸ್.ಎ.ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವ ದಿಸೆಯಲ್ಲಿ ಷೋಕಾಸ್ ನೋಟಿಸ್ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ‘ಇಬ್ಬರು ಅಧಿಕಾರಿಗಳಿಗೆ ಕರ್ನಾಟಕ ನಾಗರಿಕ ಸೇವಾ ನಿಯಮ 11ರ ಅನ್ವಯ ನೋಟಿಸ್ ನೀಡಲಾಗಿದೆ. ನಂತರ ಶಿಸ್ತು ಕ್ರಮ ಜರುಗಿಸಲಾಗುವುದು ’ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.