ADVERTISEMENT

‘ಮಾಸ್ತಿಗುಡಿ’ ಚಿತ್ರದ ದುರಂತ: ಅಧೀನ ನ್ಯಾಯಾಲಯದ ವಿಚಾರಣೆ ರದ್ದು

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 19:30 IST
Last Updated 12 ಜನವರಿ 2018, 19:30 IST

ಬೆಂಗಳೂರು: ದುನಿಯಾ ವಿಜಯ್ ನಟನೆಯ ‘ಮಾಸ್ತಿಗುಡಿ’ ಚಿತ್ರದ ಚಿತ್ರೀಕರಣ ವೇಳೆ ನಡೆದಿದ್ದ ದುರಂತ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ಐವರು ಆರೋಪಿಗಳ ವಿರುದ್ಧ ಹೊರಿಸಿದ್ದ ಉದ್ದೇಶಪೂರ್ವಕವಲ್ಲದ ನರಹತ್ಯೆ ದೋಷಾರೋಪವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿದ್ದ ಸೆಷನ್ಸ್ ಕೋರ್ಟ್ ಕ್ರಮವನ್ನು ಪ್ರಶ್ನಿಸಿ ನಿರ್ಮಾಪಕ ಸುಂದರ್ ಪಿ.ಗೌಡ, ನಿರ್ದೇಶಕ ಆರ್.ನಾಗಶೇಖರ್, ಸಹಾಯಕ ನಿರ್ದೇಶಕರಾದ ಎಸ್.ಭರತ್ ರಾವ್, ಮಾರದಪ್ಪ ಮತ್ತು ಸಾಹಸ ನಿರ್ದೇಶಕ ಕೆ.ರವಿಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ, ‘ ಅಧೀನ ನ್ಯಾಯಾಲಯ ಅರ್ಜಿದಾರರನ್ನು ಐಪಿಸಿ ಕಲಂ 304 ಅಡಿಯಲ್ಲಿ ಉದ್ದೇಶಪೂರ್ವಕವಲ್ಲದ ನರಹತ್ಯೆ ಆರೋಪಿಗಳಾಗಿ ಪರಿಗಣಿಸಿರುವ ಕ್ರಮ’ ಕಾನೂನು ಬಾಹಿರವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ನಿರ್ದೇಶಿಸಲಾಗಿದೆ.

ADVERTISEMENT

ಚಿತ್ರೀಕರಣದ ವೇಳೆ ಖಳನಟರಾದ ಅನಿಲ್ ಮತ್ತು ಉದಯ್ ಸಾವನ್ನಪ್ಪಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.