ADVERTISEMENT

‘ನಮ್ಮ ರೈಲು ಕಾರ್ಮಿಕ’ ಆ್ಯಪ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2018, 19:30 IST
Last Updated 13 ಜನವರಿ 2018, 19:30 IST

ಬೆಂಗಳೂರು: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಸಿಬ್ಬಂದಿಗೆ ಸಂಬಂಧಿಸಿದ ಮಾಹಿತಿಗಳನ್ನು ಹಂಚಿಕೊಳ್ಳುವ ಸಲುವಾಗಿ ‘ನಮ್ಮ ರೈಲು ಕಾರ್ಮಿಕ’ ಮೊಬೈಲ್‌ ಆ್ಯಪ್ ಅಭಿವೃದ್ಧಿಪಡಿಸಿದೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿನ 100 ರೈಲ್ವೆ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಸಂಬಳ, ರಜೆ, ಪಿಂಚಣಿ ಕುರಿತ ವಿವರಗಳು ಇದರಲ್ಲಿ ಲಭ್ಯ. ಸಿಬ್ಬಂದಿ ಈ ಆ್ಯಪ್‌ ಅನ್ನು ಗೂಗಲ್‌ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್‌ ಮಾಡಿಕೊಂಡು ಬಳಸಬಹುದು.

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಎ.ಕೆ.ಗುಪ್ತಾ ಹಾಗೂ ವಿಭಾಗೀಯ ವ್ಯವಸ್ಥಾಪಕ ಆರ್.ಎಸ್‌.ಸಕ್ಸೇನಾ ಹಾಗೂ ವಿಭಾಗದ ಹಿರಿಯ ಮಾನವಸಂಪನ್ಮೂಲ ಅಧಿಕಾರಿ ಕೆ.ಆಸಿಫ್‌ ಹಫೀಜ್‌ ಅವರು ವಿಭಾಗೀಯ ಕಚೇರಿಯಲ್ಲಿ ಶನಿವಾರ ಆ್ಯಪ್‌ ಬಿಡುಗಡೆ ಮಾಡಿದರು.

ADVERTISEMENT

‘ನಮ್ಮ ವಿಭಾಗದಲ್ಲಿ 10,500 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ಅವರು ಪದೇ ಪದೇ ಕಚೇರಿಗೆ ಭೇಟಿ ನೀಡಬೇಕಾಗುತ್ತಿತ್ತು. ಅವರಿಗೆ ಅನುಕೂಲ ಕಲ್ಪಿಸಲು ಈ ಆ್ಯಪ್‌ ಅಭಿವೃದ್ಧಿಪಡಿಸಲಾಗಿದೆ’ ಎಂದು ವಿಭಾಗೀಯ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.