ADVERTISEMENT

ತ್ರಿವಳಿ ತಲಾಖ್‌: ನಾಳೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 19:30 IST
Last Updated 18 ಜನವರಿ 2018, 19:30 IST

ಬೆಂಗಳೂರು: ತ್ರಿವಳಿ ತಲಾಖ್‌ ಪದ್ಧತಿ ನಿಷೇಧಿಸುವ ಮತ್ತು ಅದನ್ನು ಕ್ರಿಮಿನಲ್‌ ಅಪರಾಧವೆಂದು ಪರಿಗಣಿಸುವ ಮಸೂದೆ ವಿರೋಧಿಸಿ ಇದೇ 20ರಂದು  ಪುರಭವನದ ಎದುರು ಮಧ್ಯಾಹ್ನ 12ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂಲೀಗ್ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲೀಗ್‌ನ ಅಧ್ಯಕ್ಷ ಡಾ.ಮುಹಮ್ಮದ್‌ ಫಾರೂಕ್, ‘ಕೇಂದ್ರವು ಮುಸ್ಲಿಮರ ಸಂಸ್ಕೃತಿ ನಾಶ ಮಾಡಲು ಮುಂದಾಗಿದೆ. ಮುಸ್ಲಿಮರ ಭಾವನೆ ಮೇಲೆ ದಾಳಿ ಮಾಡುವ ಹುನ್ನಾರ ನಡೆಸಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT