ADVERTISEMENT

ಇಂದಿನಿಂದ ‘ಗ್ರಾಮ ನವ ನಿರ್ಮಾಣ ಯಾತ್ರೆ’

​ಪ್ರಜಾವಾಣಿ ವಾರ್ತೆ
Published 19 ಜನವರಿ 2018, 19:30 IST
Last Updated 19 ಜನವರಿ 2018, 19:30 IST

ಬೆಂಗಳೂರು: ‘ನಗರದ ಆರು ದೂರ ಶಿಕ್ಷಣ ಅಧ್ಯಯನ ಕೇಂದ್ರಗಳಲ್ಲಿನ ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಿ’ ಎಂದು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಸಲ್ಲಿಸಲಾದ ಅರ್ಜಿಗಳನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಇದೇ 22ರಿಂದ ಆರಂಭವಾಗುತ್ತಿರುವ ದೂರ ಶಿಕ್ಷಣ ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ವಿವಿಧ ಕೋರ್ಸ್‌ಗಳ ಪರೀಕ್ಷೆಗೆ ಅರ್ಜಿದಾರರ ಕೇಂದ್ರಗಳ ವಿದ್ಯಾರ್ಥಿಗಳಿಗೂ ಅವಕಾಶ ನೀಡಿ’ ಎಂದು ಆದೇಶಿಸಿದೆ.

ತಮ್ಮ ಕೇಂದ್ರಗಳಲ್ಲಿನ ವಿದ್ಯಾರ್ಥಿಗಳಿಗೆ ಅನುಮತಿ ನಿರಾಕರಿಸಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಕ್ರಮ ಪ್ರಶ್ನಿಸಿ ಶ್ರೀನಿವಾಸ ಎಜುಕೇಷನ್ ಟ್ರಸ್ಟ್ ಹಾಗೂ ಐದು ಅಧ್ಯಯನ ಕೇಂದ್ರಗಳು ಈ ಅರ್ಜಿ ಸಲ್ಲಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.