ADVERTISEMENT

‘ನೃತ್ಯದಿಂದ ಮಾನಸಿಕ ಸದೃಢತೆ’

​ಪ್ರಜಾವಾಣಿ ವಾರ್ತೆ
Published 21 ಜನವರಿ 2018, 19:41 IST
Last Updated 21 ಜನವರಿ 2018, 19:41 IST
ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಒಟ್ಟಿಗೆ ನೃತ್ಯ ಪ್ರದರ್ಶಿಸಿದರು   – ಪ್ರಜಾವಾಣಿ ಚಿತ್ರ
ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಒಟ್ಟಿಗೆ ನೃತ್ಯ ಪ್ರದರ್ಶಿಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ನೃತ್ಯದಿಂದ ಮಕ್ಕಳಿಗೆ ಸಾಕಷ್ಟು ವ್ಯಾಯಾಮವಾಗುತ್ತದೆ. ಅಲ್ಲದೆ ಮಾನಸಿಕವಾಗಿಯೂ ಸದೃಢರಾಗುತ್ತಾರೆ ಎಂದು ಭರತನಾಟ್ಯ ಕಲಾವಿದೆ ಬೃಂದಾ ದೀಪಕ್ ತಿಳಿಸಿದರು.

ರಾಮಮೂರ್ತಿನಗರದ ನಾಟ್ಯಶೈಲಿ ಭರತನಾಟ್ಯ ಶಾಲೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ‘ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಭರತನಾಟ್ಯ ಕಲೆಯಲ್ಲಿ ತೊಡಗಿಕೊಳ್ಳುವಂತೆ ಪ್ರತಿಯೊಬ್ಬ ಪಾಲಕರು ಮಕ್ಕಳನ್ನು ಪ್ರೋತ್ಸಾಹಿಸಿಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನೂರಾರು ಮಕ್ಕಳು ಒಟ್ಟಿಗೆ ನೃತ್ಯ ಪ್ರದರ್ಶಿಸಿದರು. ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.