ADVERTISEMENT

ಮಹದಾಯಿ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಜನವರಿ 2018, 19:48 IST
Last Updated 22 ಜನವರಿ 2018, 19:48 IST
ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು –ಪ್ರಜಾವಾಣಿ ಚಿತ್ರ
ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಮಹದಾಯಿ ವಿವಾದ ಇತ್ಯರ್ಥಪಡಿಸಲು ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟವು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.

ಜಾಲಹಳ್ಳಿ ಕ್ರಾಸ್‌ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ವಾಹನಗಳ ಮೂಲಕ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು, ಪ್ರತಿಕೃತಿಗಳನ್ನು ಸುಟ್ಟು ಹಾಗೂ ಖಾಲಿ ಬಿಂದಿಗೆಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಮಹದಾಯಿ ವಿವಾದವನ್ನು ಬಗೆಹರಿಸುವ ಸಾಮರ್ಥ್ಯ ಕೇಂದ್ರ ಸರ್ಕಾರಕ್ಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಒಂದೇ ಕಾರಣಕ್ಕೆ ಈ ವಿಚಾರದಲ್ಲಿ ಮೌನ ವಹಿಸಿದೆ. ಹೀಗಾಗಿ, ಎರಡು ರಾಜ್ಯಗಳ ಮುಖಂಡರ ಜತೆಗೆ ರಾಷ್ಟ್ರಪತಿ ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒಕ್ಕೂಟದ ಅಧ್ಯಕ್ಷ ಕೆ.ಎನ್.ಲಿಂಗೇಗೌಡ ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.