ADVERTISEMENT

ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 19:58 IST
Last Updated 26 ಜನವರಿ 2018, 19:58 IST
ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು. ವಾಟಾಳ್‌ ನಾಗರಾಜ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್‌, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಇದ್ದಾರೆ –ಪ್ರಜಾವಾಣಿ ಚಿತ್ರ
ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು. ವಾಟಾಳ್‌ ನಾಗರಾಜ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್‌, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಇದ್ದಾರೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಸೈನಿಕ ಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನವು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಅವರ 187ನೇ ಸ್ಮರಣೋತ್ಸವದಲ್ಲಿ ಅವರು ಮಾತನಾಡಿದರು.

‘ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಮೂಲಕ ರಾಯಣ್ಣ ಹುಟ್ಟೂರು ಹಾಗೂ ಸಮಾಧಿ ಸ್ಥಳ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ವಿವಿಧ ಕಾಮಗಾರಿಗಳಿಗೆ ₹257 ಕೋಟಿಯ ಟೆಂಡರ್ ಕರೆಯಲಾಗಿದೆ’ ಎಂದು ಹೇಳಿದರು.

ADVERTISEMENT

‘ಸ್ವಾಮಿನಿಷ್ಠೆ, ಸ್ವಾಭಿಮಾನ ಹಾಗೂ ದೇಶಭಕ್ತಿಗೆ ಮತ್ತೊಂದು ಹೆಸರೇ ರಾಯಣ್ಣ. ಅವರಿಂದ ಸ್ಫೂರ್ತಿ ಪಡೆದು ನಾಡು, ನುಡಿ, ನೆಲ ಹಾಗೂ ಜಲ ಸಂರಕ್ಷಣೆಗಾಗಿ ಪ್ರತಿಯೊಬ್ಬರೂ ಹೋರಾಡಬೇಕು. ಯುವ ಪೀಳಿಗೆಗೆ ರಾಯಣ್ಣ ಅವರ ತ್ಯಾಗ ಹಾಗೂ ಬಲಿದಾನದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ’ ಎಂದರು.

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ‘ರಾಯಣ್ಣ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಬೆಂಗಳೂರು– ದೇವನಹಳ್ಳಿ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರಿಡಬೇಕು’ ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

* ಕಿತ್ತೂರು ರಾಣಿ ಚೆನ್ನಮ್ಮ ಅವರ ಅರಮನೆ ಪುನಶ್ಚೇತನಕ್ಕೆ ತೀರ್ಮಾನಿಸಲಾಗಿದೆ.

–ಸಿದ್ದರಾಮಯ್ಯ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.