ADVERTISEMENT

ಪೊಲೀಸರ ಮೇಲೆ ಹಲ್ಲೆ: ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2018, 19:46 IST
Last Updated 27 ಜನವರಿ 2018, 19:46 IST

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ನಿರ್ದೇಶನ ನೀಡಲಾಗಿದೆ. ವಿಧಾನಸೌಧದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ನಡೆದ ಪೊಲೀಸ್‌ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು.

ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಐಪಿಸಿಯಡಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಡಿ. ಇದರಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚು ಎಂಬ ಭಾವನೆ ಬರುತ್ತಿದೆ. ಸಂಚಾರ ನಿಯಮದಪ್ರಕಾರ ದಂಡ ವಿಧಿಸಬಹುದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ರೌಡಿಗಳನ್ನು ನಿರ್ದಾಕ್ಷಿಣ್ಯವಾಗಿ ಬಗ್ಗು ಬಡಿಯಬೇಕು. ಮಹಿಳಾ ಕಾಲೇಜುಗಳ ಸುತ್ತಮುತ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನು ತಪ್ಪಿಸಲು ವಿಶೇಷ ಪೊಲೀಸ್‌ ವ್ಯವಸ್ಥೆ ಮಾಡಬೇಕು. ಬೆಂಗಳೂರು ನಗರ ಮತ್ತು ರಾಜ್ಯದ ಇತರ ಕಡೆಗಳಲ್ಲಿ ಗಾಂಜಾ ಮತ್ತು ಇತರ ಮಾದಕ ಪದಾರ್ಥಗಳನ್ನು ಮಾರುವವರನ್ನು ಬಂಧಿಸಿಬೇಕು ಎಂಬ ನಿರ್ದೇಶನ ನೀಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.